Ad Widget .

ಮಂಗಳೂರು : ಜಿಲ್ಲೆಯಲ್ಲಿ ತಂಪೆರೆದ ಬೇಸಿಗೆ ಮಳೆ| ಮುಂದಿನ 5 ದಿನ ಮಳೆ ಮುಂದುವರೆಯುವ ಸಾಧ್ಯತೆ|

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ.

Ad Widget . Ad Widget .

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ‌ ಕುಸಿತ ಆಗಿರುವ ಕಾರಣ ಮುಂದಿನ ಒಂದೆರಡು ದಿನಗಳಲ್ಲಿ ವಿವಿಧೆಡೆ ಮಳೆಯಾಗುವ ಸಾದ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

Ad Widget . Ad Widget .

ಅದರಂತೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿತ್ತು. ಇಂದು ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಮತ್ತೆ ಗುಡುಗು ಮಿಂಚಿನ ಸಹಿತ ಮಳೆ ಸುರಿಯುತ್ತಿದೆ. ಇದರಿಂದ ಒಣ ಹಾಕಿದ ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳು ನಷ್ಟವಾಗಿವೆ.

ಸಾಮಾನ್ಯವಾಗಿ ಜನವರಿ ಅಂತ್ಯಕ್ಕೆ ದ.ಕ‌. ಜಿಲ್ಲೆಯಲ್ಲಿ ಚಳಿಯ ವಾತಾವರಣ ಕಡಿಮೆಯಾಗಿರುತ್ತದೆ. ಆದರೆ ಈ ಬಾರಿ ಮಾರ್ಚ್ ನಲ್ಲೂ ಕೆಲ ದಿನಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗೆ 11 ಗಂಟೆಯ ಬಳಿಕ ತೀವ್ರ ಬಿಸಿಲು ಕೂಡಾ ಜನರನ್ನು ಕಂಗೆಡಿಸುತ್ತಿದೆ.

ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ.

ಇಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 9 ರಿಂದ 12 ರವರೆಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *