Ad Widget .

ಭೀಕರ ಅಪಘಾತ; ಸಂಸದರ ಪುತ್ರ ಸಾವು

Ad Widget . Ad Widget .

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

Ad Widget . Ad Widget .

ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.
ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Comment

Your email address will not be published. Required fields are marked *