Ad Widget .

ಮತ್ತೊಂದು ಕ್ಯಾಪ್ಟರ್ ಪತನ| ಪೈಲಟ್ ಸಾವು

Ad Widget . Ad Widget .

ಸಮಗ್ರ ನ್ಯೂಸ್: ಶುಕ್ರವಾರ ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರ ಪೈಲಟ್ ಸಾವನ್ನಪ್ಪಿದ್ದಾರೆ ಮತ್ತು ಸಹ ಪೈಲಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲು ಹೊರಟಿತ್ತು ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಬದುಕುಳಿದವರನ್ನು ಪತ್ತೆ ಮಾಡುವ ಕಾರ್ಯಾಚರಣೆಗಳು ನಡೆಯುತ್ತಿವೆ, ತಂಡಗಳನ್ನು ಕಾಲ್ನಡಿಗೆಯಲ್ಲಿ ಕಳುಹಿಸಲಾಗಿದೆ, ಆದರೆ ವಾಯು ವಿಚಕ್ಷಣ ತಂಡಗಳು ಬದುಕುಳಿದವರನ್ನು ಹುಡುಕಳು ಪರಿಸ್ಥಿತಿ ಅನುಕೂಲವಾಗಿಲ್ಲ ಎಂದು ಹೇಳಲಾಗುತ್ತಿದೆ.

ಗಾಯಗೊಂಡ ಪೈಲಟ್‌ನನ್ನು ವೈದ್ಯಕೀಯ ಸೌಲಭ್ಯಕ್ಕೆ ಸ್ಥಳಾಂತರಿಸಲಾಗಿದೆ. ಅಪಘಾತದ ಕಾರಣ ತಕ್ಷಣವೇ ತಿಳಿದುಬಂದಿಲ್ಲ. ಅಧಿಕಾರಿಯೊಬ್ಬರ ಪ್ರಕಾರ, ಹೆಲಿಕಾಪ್ಟರ್ ಲ್ಯಾಂಡ್ ಆಗಲಿತ್ತು ಆದರೆ ಹವಾಮಾನದ ಕಾರಣ ಮತ್ತೆ ಹಾರಿದ್ದು ಆಗ ಅಪಘಾತ ಸಂಭವಿಸಿದೆ.

Leave a Comment

Your email address will not be published. Required fields are marked *