Ad Widget .

ಕಾಂಗ್ರೆಸ್ ನ ಪ್ರಮುಖ ಹೊಣೆಗಾರಿಕೆಗೆ ಗುಡ್ ಬೈ ಹೇಳ್ತಾರಂತೆ ಸೋನಿಯಾ, ರಾಹುಲ್, ಪ್ರಿಯಾಂಕ!

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್‌ ನ ಪ್ರಮುಖ ಸ್ಥಾನಗಳಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಆದರೆ ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದು ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ.

Ad Widget . Ad Widget .

ನಾಳೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಏನು ತೀರ್ಮಾನವಾಗುತ್ತದೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿರುವುದು ಇದು ಮೊದಲೇನಲ್ಲ. ಅವರ ರಾಜೀನಾಮೆ ಪ್ರಸ್ತಾವಗಳನ್ನು ಈ ಹಿಂದೆ ಸಭೆಗಳಲ್ಲಿ ತಿರಸ್ಕರಿಸಲಾಗುತ್ತಿದ್ದು, ಅವರ ಅಧಿಕಾರವನ್ನೇ ನವೀಕರಣ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಹಲವಾರು ಸದಸ್ಯರು ಬದಲಾವಣೆಯನ್ನು ಬಯಸುತ್ತಿದ್ದಾರೆಂದು ಮೂಲಗಳು ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *