ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು.
ಇತ್ತ, ಮೃತ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ್ ಹಾವೇರಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಶೇಖರ್ ಪ್ಪನವರ ಕುಟುಂಬಕ್ಕೆ ₹25 ಲಕ್ಷ ದ ಚೆಕ್ ಹಸ್ತಾಂತರಿಸಿದರು.