ಮೈಸೂರು ವಿ.ವಿ ಯಿಂದ ನಟ ದಿ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್

Ad Widget ... ..

ಸಮಗ್ರ ನ್ಯೂಸ್: ದಿವಂಗತ ನಟ ಪುನೀತ್ ರಾಜಕುಮಾರ್ ರವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದಾಗಿ ಎಂದು ಘೋಷಣೆ ಮಾಡಲಾಗಿದೆ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮೈಸೂರು ವಿವಿಯಿಂದ ಈ ಮುಖೇನ ಉಡುಗೊರೆ ನೀಡಲಾಗುತ್ತಿದೆ.

Ad Widget

ಪುನೀತ್ ರಾಜಕುಮಾರ್ ಕುಟುಂಬದವರನ್ನು ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿಯವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ ಹೇಮಂತ್ ಕುಮಾರ್ ಘೋಷಣೆ ಮಾಡಿದರು.

ಮಾರ್ಚ್ 22 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ದಿನ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ ಗೆ ಮರಣೋತ್ತರ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ ವಿ.ಎಸ್. ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದರು.

Leave a Comment

Your email address will not be published. Required fields are marked *