ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಬೇಡಿಕೆಗಳ ನಡುವೆ ಇಂದು ಸಂಜೆ ನಾಲ್ಕೂವರೆ ಗಂಟೆಗಳ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ತೀರ್ಮಾನಿಸಲಾಗಿದೆ ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಸಭೆಯು ಸೋಲಿಗೆ ಕಾರಣಗಳು ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ನಡೆಯಿತು. ಸಭೆಯ ಬಳಿಕ ಮಾತನಾಡಿದ ರಾಜೀವ್ ಶುಕ್ಲಾ, ‘ಸೋನಿಯಾ ಗಾಂಧಿ ಅವರು ಪಕ್ಷವನ್ನು ಮುನ್ನಡೆಸಬೇಕು ಎಂದು ಎಲ್ಲರೂ ಹೇಳಿದ್ದಾರೆ’ ಎಂದರು.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಮುಖ್ಯಸ್ಥೆ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿತ್ತು.