Ad Widget .

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು

Ad Widget . Ad Widget .

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಭಾನುವಾರ ನಡೆದಿದೆ. ಸಿಟ್ರೀನ್ ಪಾಯಸ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ.

ಇನ್ನು ತಕ್ಷಣ ಅವರು ಕಾರಿನಿಂದ ಹೊರಗಡೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Comment

Your email address will not be published. Required fields are marked *