ಸಮಗ್ರ ನ್ಯೂಸ್: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ.ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.