Ad Widget .

ಮಾ.15ರಂದು ಹಿಜಾಬ್ ಕುರಿತು ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ (ಮಾ. 15)ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.

Ad Widget . Ad Widget .

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

Ad Widget . Ad Widget .

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು 25ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್‌ ವಿಚಾರಣೆ ನಡೆಸಿತ್ತು.

ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದಗಳನ್ನು ಮಂಡಿಸಿದ್ದರು.

ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆಗೆ ಹಿಜಾಬ್‌ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿರುವ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.

Leave a Comment

Your email address will not be published. Required fields are marked *