ಸಮಗ್ರ ನ್ಯೂಸ್: ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವವಾದ ತೀರ್ಪು ನೀಡಿದ್ದು ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎ.ಜಿ ನಾವದಗಿ ಈ ತೀರ್ಪು ಪ್ರಕಟಿಸಿದ್ದಾರೆ.
ಸರ್ಕಾರ ವಿಧಿಸಿರುವ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯ, ಅದನ್ನು ಪ್ರಶ್ನಿಸುವಂತಿಲ್ಲ. ಸರ್ಕಾರದ ಆದೇಶ ಕಡ್ಡಾಯವಾಗಿದೆ ಎಂದು ಪೀಠ ತೀರ್ಪಿತ್ತಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ದೀಕ್ಷಿತ್, ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ಪೀಠ ಇಂದು ಈ ತೀರ್ಪು ಪ್ರಕಟಿಸಿದೆ.
ಅರ್ಜಿದಾರರು ಹಾಗೂ ಶೈಕ್ಷಣಿಕ ಸಂಸ್ಥೆಗಳ ಪರ ವಿರೋಧವಾಗಿ 25 ಕ್ಕೂ ಹೆಚ್ಚು ವಕೀಲರು 11 ದಿನಗಳ ಕಾಲ ತಮ್ಮ ವಾದಗಳನ್ನು ಮಂಡಿಸಿದ್ದರು.