Ad Widget .

ಹಿಜಾಬ್ ವಿವಾದದಲ್ಲಿ ‌ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಬರೆಯಲು ಅವಕಾಶವಿಲ್ಲ – ಸಚಿವ ಮಾಧುಸ್ವಾಮಿ

Ad Widget . Ad Widget .

ಸಮಗ್ರ ನ್ಯೂಸ್: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ತಿಳಿಸಿದ್ದಾರೆ.

Ad Widget . Ad Widget .

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಅಲ್ಲದೇ ಕೋರ್ಟ್ ತೀರ್ಪು ಬಂದ ಬಳಿಕವೂ ಕೆಲ ಕಾಲೇಜಿನಲ್ಲಿ ವಿವಾದ ಮುಂದುವರೆದಿದೆ. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಹಿಜಾಬ್ ಕಾರಣಕ್ಕೆ ಪರೀಕ್ಷೆ ತಪ್ಪಿಸಿಕೊಂಡರೆ ಮರು ಪರೀಕ್ಷೆ ಬರೆಯಲು ಅವಕಾಶವಿಲ್ಲ. ಕೋರ್ಟ್ ಮಧ್ಯಂತರ ಆದೇಶದ ಬಳಿಕವೂ ಪರೀಕ್ಷೆ ತಪ್ಪಿಸಿಕೊಂಡರೆ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ನಾವು ಒಂದು ವ್ಯವಸ್ಥೆಯಲ್ಲಿದ್ದೇವೆ. ಈಗ ಮರು ಪರೀಕ್ಷೆಗೆ ಅವಕಾಶ ಕೊಟ್ಟರೆ ಅದು ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದರು.

Leave a Comment

Your email address will not be published. Required fields are marked *