ಸುಳ್ಯ/ಪುತ್ತೂರು: ‘ದಿ ಕಾಶ್ಮೀರ ಪೈಲ್ಸ್’ ಸಿನಿಮಾ ಉಚಿತ ಪ್ರದರ್ಶನಕ್ಕೆ ಶಾಸಕರಿಂದ ವ್ಯವಸ್ಥೆ

Ad Widget ... ..

ಸಮಗ್ರ ನ್ಯೂಸ್: ದೇಶದಲ್ಲಿ ಭಾರೀ ಸಂಚಲನ ಮೂಡಿಸಿರುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರಿ ಫೈಲ್ಸ್’ ಚಲನಚಿತ್ರವನ್ನು ಸುಳ್ಯದ ಸಂತೋಷ್ ಚಿತ್ರ ಮಂದಿರ ಹಾಗೂ ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಉಚಿತ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Ad Widget

ಸುಳ್ಯದಲ್ಲಿ ಸಚಿವ ಅಂಗಾರ ಹಾಗೂ ಪುತ್ತೂರಿನಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ
ಸಿನಿಮಾ ತೋರಿಸಲು ವ್ಯವಸ್ಥೆ ಮಾಡಲಾಗಿದೆ. ಸಚಿವ ಎಸ್. ಅಂಗಾರ ನೇತೃತ್ವದಲ್ಲಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ಮಾ.19 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ 4 ಪ್ರದರ್ಶನವನ್ನು ಏರ್ಪಡಿಸಲಾಗಿದ್ದು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಚಿತವಾಗಿ ಸಿನಿಮಾ ನೋಡಬಹುದು ಎಂದು ಬಿಜೆಪಿ ಮಂಡಲ ಸಮಿತಿ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *