Ad Widget .

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ|

Ad Widget . Ad Widget .

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ.

Ad Widget . Ad Widget .

ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ಶವವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಿಮವಾಗಿ ಸಲ್ಲಿಸಬೇಕಾದ ಪೂಜೆಗಳನ್ನು ಮಾಡುವ ಕುರಿತು ಗ್ರಾಮದ ಹಿರಿಯರು ನಿರ್ಧರಿಸಲಿದ್ದಾರೆ. ಸಂಜೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ತದನಂತರ ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ಪಾರ್ಥಿವ ಶರೀರವನ್ನು ದಾನವಾಗಿ ನೀಡುತ್ತಿದ್ದೇವೆ ಎಂದು ಹೇಳಿದರು.

Leave a Comment

Your email address will not be published. Required fields are marked *