ಸಮಗ್ರ ನ್ಯೂಸ್: ಹೈಕೋರ್ಟ್ ನೀಡಿದ ತೀರ್ಪಿನ ಅನ್ವಯ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ.
ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನುಮುಂದೆ ಮತ್ತೆ ಯಾವುದೇ ಕಾರಣಕ್ಕೂ ಪರೀಕ್ಷೆ ಮತ್ತು ತರಗತಿಯಲ್ಲಿ ಹಿಜಾಬ್ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಸುಪ್ರೀಂ ತೀರ್ಪು ಬರುವವರೆಗೆ ನಿಯಮ ಸಡಿಲಿಕೆ ಮಾಡುವಂತೆ ಕೆಲ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದ್ದರು.