ಸಮಗ್ರ ಸಮಾಚಾರ: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಈ ಘೋಷಣೆ ಮಾಡಿದ್ದು, ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡುವುದು. ಇನ್ನು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ಪರಿಹಾರ ನೀಡುವುದಾಗಿ ರಾಮುಲು ಘೋಷಿಸಿದ್ದಾರೆ.
ಇಂದು ಬೆಳಗ್ಗೆ ನಡೆದ ದುರ್ಘಟನೆಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 13 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿಟಿ ಟ್ರಾವಲ್ʼಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು 5 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಓವರ್ ಸ್ಟೀಡ್ ಮತ್ತು ಚಾಲಕ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.