ಸಮಗ್ರ ನ್ಯೂಸ್: ದೇಶದಲ್ಲಿ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು. ಕಾಶ್ಮೀರದಲ್ಲಿ ಏನು ನಡೆದಿದೆ? ಯಾವುದು ಸತ್ಯ? ಅನ್ನುವುದನ್ನು ತೋರಿಸಬೇಕು. ಕಾಶ್ಮೀರದಲ್ಲಿ ಭಯೋತ್ಪಾದಕರು ಏನ್ ಮಾಡಿದರು? ಕಾಶ್ಮೀರಿ ಪಂಡಿತರು ಸೇರಿದಂತೆ ಬೇರೆ ಸಮುದಾಯದವರೊಂದಿಗೆ ಏನೆಲ್ಲಾ ಆಗಿದೆ ಅನ್ನುವುದನ್ನು ತೋರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗೆಯೇ ಗುಜರಾತ್‌ನಲ್ಲಿ ನಡೆದದ್ದು, ಲಖಿಂಪುರದಲ್ಲಿ ನಡೆದದ್ದು ತೋರಿಸಬೇಕು. ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನಾನು ಇನ್ನೂ ನೋಡಿಲ್ಲ. ನಾನು ಸಿನಿಮಾ ನೋಡುವುದೇ ಕಡಿಮೆ. ಸಿನೆಮಾ ನೋಡಲೇಬೇಕು ಅಂತ ಏನಿದೆ? ಬಹಳ ಸಿನಿಮಾಗಳನ್ನು ನಾನು ನೋಡಿಲ್ಲ. ಅದೇ ಪ್ರಕಾರ ಇದನ್ನೂ ನೋಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.