Ad Widget .

ಮಂಗಳೂರು: ಹಿಜಾಬ್ ಹಾಕಲೇಬೇಕೆಂದರೆ ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ – ಕಲ್ಲಡ್ಕ

Ad Widget . Ad Widget .

ಸಮಗ್ರ ನ್ಯೂಸ್: ಹಿಜಾಬ್ ಬೇಕು ಎನ್ನುವ ಎಸ್‍ಡಿಪಿಐಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಹಿಜಾಬ್ ಹಾಕಿಸುವ ತಾಕತ್ತು ಇದೆಯೇ? ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ ಅವರು ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಬ್ಯಾರಿಗಳೊಂದಿಗೆ ಸ್ನೇಹ ಬೆಳೆಸುವ ಮೊದಲು ಆಲೋಚನೆ ಮಾಡಬೇಕಾಗಿದೆ.

Ad Widget . Ad Widget .

ಹಿಜಾಬ್ ವಿಚಾರದಲ್ಲಿ ಮುಸಲ್ಮಾನರು ನ್ಯಾಯಾಲಯ, ಸಂವಿಧಾನ ಕಡೆಗಣಿಸಿ ಅಗತ್ಯ ಸೇವೆಯನ್ನು ಬಂದ್ ಮಾಡಿದರು. ಇವರು ಹಿಂದೂಗಳ ಜತೆ ಮಾಡುವುದು ಡೋಂಗಿ ದೋಸ್ತಿ ಎಂದು ಆರೆಸೆಸ್ಸ್ ಮುಖಂಡ‌ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಕೊರಗಜ್ಜ ಅದಿಕ್ಷೇತ್ರ ಕುತ್ತಾರಿಗೆ ರವಿವಾರ ಪಾದಯಾತ್ರೆಯ ಬಳಿಕ ಕುತ್ತಾರ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿನಲ್ಲಿ ಮುಸ್ಲಿಂ, ಕ್ರೈಸ್ತ ಎನ್ನುವ ಧರ್ಮವೇ ಇಲ್ಲ. ಕುರಾನ್, ಬೈಬಲ್ ಶಾಲೆಗೆ ತರುವ ಅವಶ್ಯಕತೆ ಕೂಡ ಇಲ್ಲ. ಇದನ್ನು ಕೇಳುವವರು ಕೂಡಾ ಇಲ್ಲ. ಸರಕಾರ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಲಿಸಲು ಮುಂದಾಗಿರುವುದು ಶ್ಲಾಘನೀಯ. ಹಿಂದೂ ಸಮಾಜ ಈ ವಿಚಾರದಲ್ಲಿ ಒಂದು ಆಗಲೇಬೇಕು. ನಾವು ರಾಷ್ಟ್ರಧ್ವಜಕ್ಕೆ ಗೌರವ ನೀಡೋಣ. ಒಂದಲ್ಲ ಒಂದು ದಿನ ರಾಷ್ಟ್ರಧ್ವಜ ಕೇಸರಿ ಬಣ್ಣದ್ದಾಗಲೂಬಹುದು ಎಂದು ಹೇಳಿದರು.

Leave a Comment

Your email address will not be published. Required fields are marked *