ಸಮಗ್ರ ನ್ಯೂಸ್: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ತಲುಪಿದೆ.
ದುಬೈ ಮೂಲಕ ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಂತಿಮ ದರ್ಶನ ಪಡೆದರು. ಮೃತ ನವೀನ್ ಅಣ್ಣ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ತೆಗೆದುಕೊಂಡು ಆಂಬ್ಯುಲೆನ್ಸ್ನಲ್ಲಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ತೆರಳಿದರು.