Ad Widget .

“ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ” – ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬಹಿರಂಗ ಕೊಲೆ ಬೆದರಿಕೆಯೊಡ್ಡಿದ ಇಸ್ಲಾಮಿಕ್ ಸಂಘಟನೆ

Ad Widget . Ad Widget .

ಸಮಗ್ರ ನ್ಯೂಸ್: “ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ಇಸ್ಲಾಮಿಕ್‌ ಸಂಘಟನೆಯೊಂದು ಬಹಿರಂಗವಾಗಿಯೇ ಕೊಲೆ ಬೆದರಿಕೆ ಹಾಕಿದೆ.

Ad Widget . Ad Widget .

ಮಧುರೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡು ತೌಹೀದ್‌ ಜಮಾತ್‌(ಟಿಎನ್‌ಟಿಜೆ) ಸಂಘಟನೆಯ ನಾಯಕ ಕೊವಾಯಿ ಆರ್‌. ರೆಹಮತುಲ್ಲಾ, “ಮುಂದೊಂದು ದಿನ ಹಿಜಾಬ್‌ ತೀರ್ಪು ಕೊಟ್ಟ ಆ ನ್ಯಾಯಮೂರ್ತಿಗಳಿಗೆ ಏನಾದರೂ ಆದರೆ, ಅದಕ್ಕೆ ಅವರೇ ಹೊಣೆಗಾರರು ಹೊರತು ನಾವಲ್ಲ’ ಎಂದು ಹೇಳಿದ್ದರು. ಹಾಗೆಯೇ ಈ ರೀತಿ ಬೆದರಿಕೆ ಹಾಕಿದ್ದಕ್ಕೆ ನಮ್ಮನ್ನು ಜೈಲಿಗೆ ಹಾಕುವುದಾದರೆ ಅದನ್ನು ನಾವು “ಹಿಜಾಬ್‌ಗಾಗಿ ಹೋರಾಡಿ ಜೈಲಿಗೆ ಹೋದದ್ದು’ ಎಂದು ಪರಿಗಣಿಸುತ್ತೇವೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ರೆಹಮತುಲ್ಲಾ, ಟಿಎನ್‌ಟಿಜೆ ಮಧುರೆ ಜಿಲ್ಲಾ ನಾಯಕ ಅಸಾನ್‌ ಬಾತ್‌ಶಾ ಹಾಗೂ ಉಪ ಕಾರ್ಯದರ್ಶಿ ಹಬೀಬುಲ್ಲಾ ವಿರುದ್ಧ ಐಪಿಸಿಯ 5 ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮೂವರೂ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

Leave a Comment

Your email address will not be published. Required fields are marked *