ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

. Ad Widget . Ad Widget

ಸಮಗ್ರ ನ್ಯೂಸ್: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಾ.21ರ ಸೋಮವಾರ ರಾತ್ರಿ ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.

. Ad Widget . . Ad Widget . Ad Widget

ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ. ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ನು ಥೋಮಸ್ ನನ್ನು ಇರಿದಿದ್ದು , ಬೊಬ್ಬೆ ಕೇಳಿ ಸ್ಥಳೀಯರು ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಥೋಮಸ್ ರನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.

ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆ ಗೆ ಶರಣಾಗಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ವಿಲ್ಫ್ರೆಡ್’ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *