ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ ಬರೆದ ಕರ್ನಾಟಕ ಸರ್ಕಾರ| ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಸಮಗ್ರ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

Ad Widget ... ..

ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾಗುತ್ತದೆ. ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

Ad Widget

ಸದ್ಯಕ್ಕೆ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದಿಲ್ಲ ಶುಲ್ಕ ವಿಧಿಸದೆ ಉಚಿತವಾಗಿ ವೈದ್ಯಕೀಯ ಕಲಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

Leave a Comment

Your email address will not be published. Required fields are marked *