ಸಮಗ್ರ ನ್ಯೂಸ್: ಅನುಮತಿ ಇಲ್ಲದೇ ವಿದೇಶಕ್ಕೆ ತೆರಳಿದ ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಪ್ರವಾಸಕ್ಕೆ ತೆರಳುವುದಾಗಿ ಹೇಳಿ ದುಬೈಗೆ ತೆರಳಿದ್ದ ಸಂಚಾರ ಉತ್ತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮುಹಮ್ಮದ್ ಶರೀಫ್ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ದುಬೈ ಪ್ರವಾಸ ಮಾಡಿರುವುದು ದೃಢಪಟ್ಟಿದೆ. ಮಹಮ್ಮದ್ ಷರೀಫ್ ಅವರು ಊರಿನ ಮನೆಯಲ್ಲಿ ಅತೀ ಅಗತ್ಯದ ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ಮಾಹಿತಿ ನೀಡಿ ರಜೆ ಪಡೆದುಕೊಂಡಿದ್ದರು.
ವಿದೇಶ ಪ್ರಯಾಣ ಮಾಡುವಾಗ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮ 2021ರ ನಿಯಮ 8ರ ಉಪನಿಯಮ 2 ಕ್ಕೆ ಸಂಬಂಧಪಟ್ಟ ಇಲಾಖಾ ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯದೇ, ಲಾಖಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಮಾನತು ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ಆಗಿ ಶರೀಫ್ ಕೆಲಸ ಮಾಡುತ್ತಿದ್ದರು. ಪೊಲೀಸ್ ಇಲಾಖೆ ನಿಯಮದ ಪ್ರಕಾರ ವಿದೇಶಿ ಪ್ರಯಾಣಕ್ಕೆ ಅನುಮತಿ ಕಡ್ಡಾಯ ಮೂಲಗಳ ಪ್ರಕಾರ ಕ್ರಿಮಿನಲ್ ಒಬ್ಬನ ಜೊತೆ ವಿದೇಶ ಪ್ರವಾಸ ಹೋಗಿದ್ದ ಮಾಹಿತಿ ಲಭ್ಯವಾಗಿದೆ. ಪ್ರಕರಣವೊಂದರ ತನಿಖೆ ವೇಳೆ ಶರೀಫ್ ವಿದೇಶಿ ಪ್ರವಾಸದ ಮಾಹಿತಿ ಲಭ್ಯವಾಗಿದೆ.