Ad Widget .

ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ

Ad Widget . Ad Widget .

ಸಮಗ್ರ ನ್ಯೂಸ್: ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕೋಮು ಗಲಭೆಗೆ ಪ್ರಯೋಗಶಾಲೆಯಾಗಿ ಉಪಯೋಗಿಸುವ ಕೆಲಸವನ್ನು ಮಾಡಲಾಗುತ್ತಿದ್ದು, ಪುಂಡ ಪೋಕರಿಗಳ ಕೆಲಸಕ್ಕೆ ಕಡಿವಾಣ ಹಾಕಬೇಕು. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಮಿಥುನ್ ರೈ ಎಚ್ಚರಿಸಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸೌಹಾರ್ದದ ಕ್ಷೇತ್ರವಾಗಿರುವ ಬಪ್ಪನಾಡು ಜಾತ್ರೋತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂದು ಹೇಳಿ ಬ್ಯಾನರ್ ಹಾಕಿರುವುದರ ಹಿಂದೆ ಜಿಲ್ಲಾಡಳಿತದ ಕುಮ್ಮಕ್ಕು ಇರುವ ಅನುಮಾನ ಕಾಡುತ್ತಿದೆ ಎಂದು ಆರೋಪಿಸಿದರು.

ತಾವು ಆ ಬ್ಯಾನರ್ ಹಾಕಿಲ್ಲ, ಇದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಕ್ಷೇತ್ರದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದ್ದರೂ ಬ್ಯಾನರ್ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೂಡಾ ವೌನ ವಹಿಸಿದ್ದಾರೆ ಎಂದು ದೂರಿದರು.

ಯಾವುದೇ ಧಾರ್ಮಿಕ ಕ್ಷೇತ್ರಗಳ ಆಡಳಿತ ಸಮಿತಿಯು ಕೈಗೊಳ್ಳುವ ನಿರ್ಧಾರದ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಅದನ್ನು ಬಿಟ್ಟು ಕಿಡಿಗೇಡಿಗಳು, ಸೌಹಾರ್ದ ಕೆಡಿಸಲು ಯಾವುದೇ ಧರ್ಮ, ಜಾತಿಯವರು, ಸಂಘಟನೆಗಳವರು ಇಂತಹ ಕಾರ್ಯ ಮಾಡಿದರೂ ಖಂಡಿಸುವುದಾಗಿ ಹೇಳಿದರು.

Leave a Comment

Your email address will not be published. Required fields are marked *