ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ

Ad Widget ... ..

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ.

Ad Widget

ಪ್ರಸ್ತುತ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾ ಸಕರಿಗೆ ಮಾಸಿಕ 40,000 ರೂ.ಹಾಗೂ ಯುಜಿಸಿ ವಿದ್ಯಾರ್ಹತೆ ಹೊಂದಿರದವರಿಗೆ 35,000 ರೂ. ನಿಗದಿಪಡಿಸಲಾಗಿದೆ.

ಫೆಬ್ರವರಿಯಿಂದ ಜಾರಿಗೆ ಬರುವಂತೆ ಈ ಹಿಂದಿನ ವೇತನಕ್ಕಿಂತ ಸರಾಸರಿ 10ರಿಂದ 15 ಸಾವಿರ ರೂ. ಹೆಚ್ಚಳ ಮಾಡಲಾಗಿದೆ.

ಇದು ಮಂಗಳೂರು ವಿಶ್ವ ವಿದ್ಯಾನಿಲಯದ ಮಹತ್ವದ ಹಾಗೂ ಸ್ವಾಗತಾರ್ಹ ನಿರ್ಧಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *