ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

Ad Widget ... ..

ಸಮಗ್ರ ನ್ಯೂಸ್ : ಶ್ರೀ ಕ್ಷೇತ್ರ‌ ಧರ್ಮಸ್ಥಳ ದೇವಸ್ಥಾನಕ್ಕೆ ಬರುವ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ ಅಂತರಾಜ್ಯ ಚೋರನನ್ನು‌ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ಮಾಡಿ ಆರೋಪಿ ಹಾಗೂ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

Ad Widget

ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ‌ ನಾಯರಿ ಎಂಬವರು ಸ್ನಾನ ಮಾಡಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ತಮ್ಮ‌ ಚಿನ್ನಾಭರಣ ಹಾಗೂ ಹಣ ಇದ್ದ ಬ್ಯಾಗ್ ಇಟ್ಟಿದ್ದರು. ಈ ವೇಳೆ ಯಾರೋ ಕಳ್ಳರ‌ ಪಾಲಾಗಿತ್ತು. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

ಈ ವೇಳೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ತಾಲೂಕಿನ ಷಾರೆ ಗ್ರಾಮದ ಇಂದಿರಾನಗರದ ನಿವಾಸಿ ಮಿತುನ್ ಚೌವ್ಹಾಣ್ (31) ಸಿಕ್ಕಿ ಬಿದ್ದಿದ್ದಾನೆ. ಆತನ ಬಳಿಯಿದ್ದ 80,000/- ಮೌಲ್ಯದ 37 ಗ್ರಾಂನ ಚಿನ್ನದ ಓಲೆ, 32,000/- ಮೌಲ್ಯದ 8.04 ಗ್ರಾಂ ನ ಲಕ್ಷ್ಮೀ ಮಾಲೆ, 16,230 ಮೌಲ್ಯದ ‌ಚಿನ್ನದ ಸರ, 40,000/- ಮೌಲ್ಯದ 10.2 ಗ್ರಾಂ ನ ಬ್ರೇಸ್ ಲೈಟ್ , 15,000/- ಮೌಲ್ಯದ ಬ್ರೇಸ್ ಲೈಟ್ , 8,500/- ಮೌಲ್ಯದ 2.190 ಗ್ರಾಂ ನಉಂಗುರವನ್ನು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 2.4 ಲಕ್ಷ ಆಗಿರುತ್ತದೆ.

ಆರೋಪಿ ದೇಶದ ವಿವಿಧ ಪ್ರಸಿದ್ಧ ಯಾತ್ರಾ ಸ್ಥಳಗಳಿಂದ ಕಳ್ಳತನ ಮಾಡುವ ಅಭ್ಯಾಸ ಹೊಂದಿದ್ದು, ಈತನ ಮೇಲೆ ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *