Ad Widget .

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್

ಸಮಗ್ರ ನ್ಯೂಸ್: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ 2022 ಅನ್ನು ಪ್ರಧಾನ ಮಾಡಿದರು.

Ad Widget . Ad Widget .

ಈ ವೇಳೆ ಸುರಂಗ ಕೊರೆದು ಭಗೀರಥ ಪ್ರಯತ್ನದ ಮೂಲಕ ನೀರು ಹರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಅಮೈ ಮಹಾಲಿಂಗ ನಾಯ್ಕ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದರು.

Ad Widget . Ad Widget .

ಈ ವೇಳೆ ಅವರು ಮುಟ್ಟಾಳೆ ಧರಿಸಿ ಆಗಮಿಸುವ ಮೂಲಕ ತುಳುನಾಡಿನ ಕೃಷಿ ಪರಂಪರೆಯನ್ನು ದೇಶ ವ್ಯಾಪ್ತಿ ಬಿಂಬಿಸಿದರು. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 76ರ ಹರೆಯದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್‌ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಿ ಸಾಧನೆ ಮಾಡಿದ್ದರು.

ಆರು ಸುರಂಗ ಕೊರೆದರೂ ನೀರು ಸಿಕ್ಕಿರಲಿಲ್ಲ. ಆದರೂ, ತನ್ನ ಸತತ ಪ್ರಯತ್ನ ಬಿಡದ ಮಾಹಾಲಿಂಗ ನಾಯ್ಕ ಏಳನೇ ಸುರಂಗ ಕೊರೆದು ತಮ್ಮ ಪ್ರಯತ್ನಕ್ಕೆ ಯಶಸ್ಸು ತಂದುಕೊಂಡಿದ್ದರು. ಇದೇ ಸಾಧನೆಗೆ ಅವರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

Leave a Comment

Your email address will not be published. Required fields are marked *