Ad Widget .

ಹಿಜಾಬ್ ಗಾಗಿ ಭವಿಷ್ಯ ಶಿಕ್ಷಣಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು| ಎಸ್ಎಸ್ಎಲ್ ಸಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳೆಷ್ಟು ಗೊತ್ತಾ?

Ad Widget . Ad Widget .

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ ಮಾಡಲಾಗಿದ್ದು, ರಾಜ್ಯದ ಹಲವು ವಿದ್ಯಾರ್ಥಿಗಳು ಹಿಜಾಬ್‌ ವಿಚಾರಕ್ಕೆ ಪಟ್ಟು ಹಿಡಿದು ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿದ್ದಾರೆ.

Ad Widget . Ad Widget .

ಮೈಸೂರು ಜಿಲ್ಲೆಯಲ್ಲಿ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರಾಗಿದ್ದು, ಪರೀಕ್ಷೆ ಬೇಡ, ಹಿಜಾಬ್‌ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಗೆ ಹಿಜಾಬ್‌ ಧರಿಸಿಯೇ ಬಂದಿದ್ದು, ಹಿಜಾಬ್‌ ತೆಗೆದಿಟ್ಟು ಪರೀಕ್ಷೆ ಬರೆಯುವಂತೆ ಅಧೀಕ್ಷಕರು ಸೂಚನೆ ನೀಡಿದ್ದಾರೆ.‌ ಏಕಾಏಕಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿ ಮನೆಗೆ ತೆರಳಿದ್ದಾರೆ. ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನೇ ಧಿಕ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ವಿದ್ಯಾರ್ಥಿಗಳು ಧರ್ಮ ಸಂಘರ್ಷಕ್ಕೆ ಬಲಿಬಿದ್ದಿದ್ದು, ಭವಿಷ್ಯವನ್ನು ಕಡೆಗಣಿಸಿದ್ದಾರೆ. ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದ್ದರೂ ಈ ರೀತಿಯ ವರ್ತನೆ ಶಿಕ್ಷಣ ಇಲಾಖೆಗೆ ತಲೆನೋವಾಗಿದೆ.

Leave a Comment

Your email address will not be published. Required fields are marked *