ಸಮಗ್ರ ನ್ಯೂಸ್: ವಿವಿಧ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಏಪ್ರಿಲ್ 5 ರಂದು ಕರ್ನಾಟಕಕ್ಕೆ ಆಗಮಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ರದ್ದಾಗಿದೆ. ಸತತ ಎರಡನೇ ಬಾರಿ ಪ್ರಧಾನಿ ರಾಜ್ಯ ಪ್ರವಾಸ ರದ್ದಾಗಿದೆ. ಈ ಕುರಿತು ಸಿಎಂ ಕಚೇರಿಗೆ ಪ್ರಧಾನಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೋದಿ ಪ್ರವಾಸ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದರು. ಏಪ್ರಿಲ್ 5 ರಂದು ಪ್ರಧಾನಿ ಭೇಟಿ ನೀಡುವ ಸಾಧ್ಯತೆ ಇದೆ ಎಂದಿದ್ದರು. ಇದೇ ವೇಳೆ ಏಪ್ರಿಲ್ 1 ರಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಇದರಲ್ಲಿ ಪ್ರಧಾನಿ ಮೋದಿ ಪ್ರವಾಸ ರದ್ದಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.