Ad Widget .

ಏಪ್ರಿಲ್ 2: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

Ad Widget . Ad Widget .

ಸಮಗ್ರ ನ್ಯೂಸ್ :ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಟೀಸರ್ ಏಪ್ರಿಲ್ 2 ರಂದು ರಿಲೀಸ್ ಆಗುತ್ತಿದೆ ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ.

Ad Widget . Ad Widget .

ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬೀನೇಷನ್‍ನಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ವಿಕ್ರಾಂತ್ ರೋಣ’. ಈ ಸಿನಿಮಾದ ಅಪ್ಡೇಟ್‍ಗಾಗಿ ಅಭಿಮಾನಿಗಳು ಕಾಯುತ್ತಿದ್ದು, ಸ್ಟಾರ್ ಜೋಡಿಯ ಸಿನಿಮಾ ಹೇಗೆ ಇರುತ್ತೆ ಎಂದು ಉತ್ಸಾಹದಲ್ಲಿ ಇದ್ದಾರೆ. ಮಾ. 29ರಂದು ಅನೂಪ್ ಭಂಡಾರಿ ಅವರು ‘ವಿಕ್ರಾಂತ್ ರೋಣ’ ಬಗ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಟ್ವಿಟ್ಟರ್‍ನಲ್ಲಿ ಅನೂಪ್, ಅಂನೌನ್ಸಿನ್ಗ್ ದಿ ಅರೈವಲ್ ಆಫ್ ದಿ ಡೆವಿಲ್! ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಏಪ್ರಿಲ್ 2ರಂದು 9:55ಕ್ಕೆ ರಿಲೀಸ್ ಆಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅಭಿಮಾನಿಗಳು ರೀ-ಟ್ವೀಟ್ ಮಾಡಿದ್ದು, ನಮ್ಮ ಬಾಸ್, ನಮ್ಮ ಕಿಚ್ಚ ಎಂದು ಬರೆದುಕೊಂಡು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಿಚ್ಚನ ಅಪ್ಡೇಟ್‍ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಭಂಡಾರಿ ಅವರ ಟ್ವೀಟ್ ನೋಡಿ ಫುಲ್ ಖುಷ್ ಆಗಿದ್ದಾರೆ. ಇದನ್ನು ಕಿಚ್ಚ ಸಹ ಶೇರ್ ಮಾಡಿಕೊಂಡಿದ್ದಾರೆ. ಕಿಚ್ಚನನ್ನು ತೆರೆಮೇಲೆ ನೋಡಬೇಕೆಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತುಕೊಂಡಿದ್ದಾರೆ.

‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದರಿಂದ, ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೇ ಈ ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ತಯಾರಾಗಿರುವುದು ಮತ್ತೊಂದು ವಿಶೇಷ. ಏಕಕಾಲಕ್ಕೆ ಹಾಲಿವುಡ್ ಮತ್ತು ಭಾರತೀಯ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

Leave a Comment

Your email address will not be published. Required fields are marked *