ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಪ್ರಾರಂಭಗೊಂಡು ಮುಸ್ಲಿಮರೊಂದಿಗಿನ ವ್ಯಾಪಾರಗಳನ್ನು ನಿರ್ಬಂಧಿಸುವವರೆಗೆ ಸಮಾಜದಲ್ಲಿ ಉಂಟಾಗಿರುವ ಕಂದಕಕ್ಕೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕೆಂದು ಮುಸ್ಲಿಂ ನಿಯೋಗ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿ ಮನವಿ ಮಾಡಿತು.
ನಿಯೋಗವನ್ನು ಭೇಟಿ ಮಾಡಿದ ಶ್ರೀಗಳು, ಈಗ ಉಂಟಾಗಿರುವ ಪರಿಸ್ಥಿತಿಗೆ ಮೂಲ ಕಾರಣ ಯಾರು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ. ಅದಕ್ಕೆ ಕಾರಣ ಯಾರು? ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ, ಸಮಾಜದಲ್ಲಿ ಕಾನೂನು ಶಾಂತಿ ನೆಮ್ಮದಿಗೆ ವಿರುದ್ಧವಾಗಿ ವರ್ತಿಸುತ್ತಿರುವ ರೀತಿಯನ್ನು ಸರಿಪಡಿಸಿಕೊಂಡು ಬನ್ನಿ ಮತ್ತೊಮ್ಮೆ ಮಾತನಾಡೋಣ ಎಂದು ಮುಸ್ಲಿಂ ನಿಯೋಗಕ್ಕೆ ಶ್ರೀಗಳು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.
ಗೋಹತ್ಯೆ ಯಾಕೆ ನಿಂತಿಲ್ಲ?
ಜೀವನೋಪಾಯಕ್ಕೆ ಗೋವುಗಳನ್ನು ಸಾಕುತ್ತಿರುವವರ ಮನೆಗೆ ನುಗ್ಗಿ ಬೆದರಿಕೆ ಹಾಕಿ ಗೋವುಗಳನ್ನು ಹೊತ್ತೊಯ್ಯುತ್ತಿದ್ದೀರಿ, ಇಂತಹ ಅನೇಕ ಕಾನೂನು ಬಾಹಿರ ಕೆಲಸದಿಂದ ಹಿಂದೂ ಸಮಾಜ ನೋವು ಎದುರಿಸುತ್ತಿದೆ. ನೊಂದಿರುವ ಸಮಾಜವನ್ನು ಬಿಟ್ಟು ಪರಿಹಾರ ನನ್ನ ಒಬ್ಬನಿಂದ ಸಾಧ್ಯವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.