March 2022

ಕುಕ್ಕೆ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಗೋಕಳ್ಳರು| ಸ್ವಲ್ಪದರಲ್ಲೇ ಕಟುಕರ ಕೈಯಿಂದ ಬಚಾಚಾದ ಗೋಮಾತೆ| ಸಿಸಿ ಟಿವಿಯಲ್ಲಿ ದೃಶ್ಯ ಸೆರೆ|

ಸಮಗ್ರ ಸಮಾಚಾರ: ರಾಜ್ಯದಲ್ಲಿ ಗೊ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೊ ಕಳ್ಳರ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ರಾಜ್ಯದ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಬಾಗದಲ್ಲಿ ದನ ಮಲಗಿದ್ದ ಗೋವನ್ನು ಕದ್ದೊಯ್ಯಲೆತ್ನಿಸಿ ವಿಫಲರಾದ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಮಾ.23ರಂದು ಈ ಘಟನೆ ನಡೆದಿದ್ದು, ಮುಂಜಾನೆ ಸುಮಾರು 3.30ರ ವೇಳೆಗೆ ಇನ್ನೋವಾ ಕಾರಿನಲ್ಲಿ ಬಂದ ಗೋಕಳ್ಳರು ಮಲಗಿದ್ದ ಹಸುವನ್ನು ತುಂಬಿಸಿ ಕದ್ದೊಯ್ಯಲು ಯತ್ನಿಸಿದ್ದಾರೆ. ಮಾ […]

ಕುಕ್ಕೆ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಗೋಕಳ್ಳರು| ಸ್ವಲ್ಪದರಲ್ಲೇ ಕಟುಕರ ಕೈಯಿಂದ ಬಚಾಚಾದ ಗೋಮಾತೆ| ಸಿಸಿ ಟಿವಿಯಲ್ಲಿ ದೃಶ್ಯ ಸೆರೆ| Read More »

ಹಿಜಾಬ್ ವಿವಾದ; ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಮನ್ವಯ ಸಮಿತಿ| ಹೈಕೋರ್ಟ್ ತೀರ್ಪು ವಿರೋಧಿಸಿ ಘೋಷಣೆ|

ಸಮಗ್ರ ನ್ಯೂಸ್ : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಅಹಿತಕರ ಘಟನೆಗಳಿಗೆ ಕಾರಣವಾಗಿದ್ದ ಹಿಜಾಬ್ ಬಗ್ಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿ ಸಮನ್ವಯ ಸಮಿತಿ ಹೆಸರಿನ ವಿದ್ಯಾರ್ಥಿಗಳ ತಂಡವೊಂದು ಮಾ 25 ರಂದು ಸಂಜೆ ದಿಢೀರ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ 100ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ನಗರದ ಕ್ಲಾಕ್‌ ಟವರ್‌ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನ್ಯಾಯಕ್ಕಾಗಿ ಅಗ್ರಹಿಸುತ್ತಿದ್ದ ಅವರು ‘ಅಲ್ಲಾಹೋ ಅಕ್ಬರ್‌’ ಘೋಷಣೆಯನ್ನು

ಹಿಜಾಬ್ ವಿವಾದ; ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಮನ್ವಯ ಸಮಿತಿ| ಹೈಕೋರ್ಟ್ ತೀರ್ಪು ವಿರೋಧಿಸಿ ಘೋಷಣೆ| Read More »

ಮಾ.28ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾರ್ಚ್ 28ರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹಿಜಾಬ್‌ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು ವಿದ್ಯಾರ್ಥಿಗಳು ಹಿಜಾಬ್ ಧರಿಸಿ

ಮಾ.28ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ Read More »

ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು?

ಸಮಗ್ರ ನ್ಯೂಸ್: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ

ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು? Read More »

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ

ಸಮಗ್ರ ನ್ಯೂಸ್: ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಲೈಂಗಿಕ ಸಂಬಂಧದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಚಳುವಳಿಯನ್ನು ನಾನು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರನ್ನು ದೈಹಿಕ ಸಂಬಂಧದ ಬಗ್ಗೆ ಕೇಳುವುದೇ ಎಂದು ಹೇಳುವ ಮೂಲಕ ಮಹಿಳೆಯರ ಕೆಂಗಣ್ಣಿಗೆ ವಿನಾಯಕನ್​ ಗುರಿಯಾಗಿದ್ದಾರೆ. ತಮಿಳಿನಲ್ಲಿ ‘ತಿಮಿರು’, ‘ಸಿರುತೈ’, ‘ಮರಿಯಾನ್’ ಮುಂತಾದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುವಲ್ಲಿ ವಿನಾಯಕನ್​ ಹೆಸರುವಾಸಿಯಾಗಿದ್ದಾರೆ. ಅಲ್ಲದೆ, ತಮ್ಮ ತವರು ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ Read More »

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ

ಸಮಗ್ರ ನ್ಯೂಸ್: ಪವಿತ್ರ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಿಂದ ತಿರುಪತಿಗೆ ಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮವು ನೂತನವಾಗಿ ರಾಜಹಂಸ ಬಸ್ ಸೌಲಭ್ಯವನ್ನು ಪ್ರಾರಂಭಿಸಿದ್ದು ಮಾ.26ರಿಂದ ಚಾಲನೆ ದೊರೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ನೂತನ ಬಸ್ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಸುಬ್ರಹ್ಮಣ್ಯದಿಂದ ತಿರುಪತಿಗೆ ಸೌಲಭ್ಯವಿದ್ದು ಕುಕ್ಕೆ ಸುಬ್ರಹ್ಮಣ್ಯದಿಂದ ರಾತ್ರಿ 9:00ಕ್ಕೆ ಹೊರಡುವ ಬಸ್ ಹಾಸನ, ಬೆಂಗಳೂರು, ಚಿತ್ತೂರು ಮೂಲಕ ಪ್ರಯಾಣಿಸಿ ಬೆಳಿಗ್ಗೆ 10:30ಕ್ಕೆ

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ Read More »

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದಿರುವುದಾಗಿ‌ ಉತ್ತರಾಖಂಡದ ಸಿಎಂ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು ಎನ್ನಲಾಗಿದೆ.‌ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಪುಷ್ಕರ್‌ ಸಿಂಗ್‌ ಧಾಮಿ ಈ ಘೋಷಣೆ ಮಾಡಿದ್ದಾರೆ. ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಅವರು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಿರ್ಧರಿಸಿದ್ದೇವೆ.

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು Read More »

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ‌ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾಗಿದ್ದಾನೆ. ಭುಕ್ತಿ ಡಾಬಾ ಮುಂದೆ ಇದ್ದ ರಸ್ತೆ ವಿಭಜಕಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಿಮೆಂಟ್ ಹೊತ್ತಿದ್ದ ಲಾರಿವೊಂದು ರಭಸದಿಂದ ಡಿವೈಡರ್‌ಗೆ ಗುದ್ದಿದ ಪರಿಣಾಮ ಡಿವೈಡರ್ ದಾಟಿ ಬೆಂಗಳೂರಿನಿಂದ‌ ಚಿಕ್ಕಬಳ್ಳಾಪುರ ಮಾರ್ಗವಾಗಿ ಸಾಗುತ್ತಿದ್ದ ಮತ್ತೊಂದು

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ Read More »

ಇಂದಿನಿಂದ ಯುಪಿನಲ್ಲಿ ಯೋಗಿ ಆದಿತ್ಯನಾಥ್ ಸೆಕೆಂಡ್ ಇನ್ನಿಂಗ್ಸ್ ಶುರು| ಮೋದಿ, ಬೊಮ್ಮಾಯಿ ಸೇರಿ ಹಲವರು ಭಾಗಿ|

ಸಮಗ್ರ ನ್ಯೂಸ್: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ ಅವರು ಶಾಸಕಾಂಗ ಪಕ್ಷದ ಸಭೆಯ ನಾಯಕರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅವರು ಮಾ.25ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರದ ವೀಕ್ಷಕರಾಗಿ ನೇಮಕರಾಗಿದ್ದ ಗೃಹಸಚಿವ ಅಮಿತ್ ಶಾ ಅವರು ಯೋಗಿ ಅವರ ಆಯ್ಕೆಯನ್ನು ಪ್ರಕಟಿಸಿದರು. ಸಹವೀಕ್ಷಕರಾಗಿದ್ದ ಹಿರಿಯ ಮುಖಂಡ ರಘುಬರ ದಾಸ್ ಅವರು ಉಪಸ್ಥಿತರಿದ್ದರು. ಶುಕ್ರವಾರ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಯೋಗಿ ಅವರ

ಇಂದಿನಿಂದ ಯುಪಿನಲ್ಲಿ ಯೋಗಿ ಆದಿತ್ಯನಾಥ್ ಸೆಕೆಂಡ್ ಇನ್ನಿಂಗ್ಸ್ ಶುರು| ಮೋದಿ, ಬೊಮ್ಮಾಯಿ ಸೇರಿ ಹಲವರು ಭಾಗಿ| Read More »

ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ

ಸಮಗ್ರ ನ್ಯೂಸ್: ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕೋಮು ಗಲಭೆಗೆ ಪ್ರಯೋಗಶಾಲೆಯಾಗಿ ಉಪಯೋಗಿಸುವ ಕೆಲಸವನ್ನು ಮಾಡಲಾಗುತ್ತಿದ್ದು, ಪುಂಡ ಪೋಕರಿಗಳ ಕೆಲಸಕ್ಕೆ ಕಡಿವಾಣ ಹಾಕಬೇಕು. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಮಿಥುನ್ ರೈ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸೌಹಾರ್ದದ ಕ್ಷೇತ್ರವಾಗಿರುವ ಬಪ್ಪನಾಡು ಜಾತ್ರೋತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂದು ಹೇಳಿ ಬ್ಯಾನರ್ ಹಾಕಿರುವುದರ ಹಿಂದೆ ಜಿಲ್ಲಾಡಳಿತದ

ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ Read More »