ಹರ್ಷ ಹತ್ಯೆ ಪ್ರಕರಣ| ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪಗೆ ಸಂಕಷ್ಟ

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ.

Ad Widget ... ..

ಶಿವಮೊಗ್ಗದಲ್ಲಿ ಕಳೆದ ಫೆ. 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ.

Ad Widget

Leave a Comment

Your email address will not be published. Required fields are marked *