Ad Widget .

ಸಿದ್ದಗಂಗಾ ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ‌ ತಮ್ಮ ಮಗುವಿಗೆ ‘ಶಿವಮಣಿ’ ಹೆಸರಿಟ್ಟ ಮುಸ್ಲಿಂ ದಂಪತಿ

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ತ್ರಿವಿಧ ದಾಸೋಹ ಇಡೀ ದೇಶಕ್ಕೆ ಜನಪ್ರಿಯ. ನಡೆದಾಡುವ ದೇವರೆಂದೇ ಜನಪ್ರಿಯರಾದವರು. ಏಪ್ರಿಲ್ 1ರಂದು ಅವರ 115ನೇ ಜಯಂತ್ಯೋತ್ಸವ ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ಭಕ್ತಿಪೂರ್ವಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದಲ್ಲಿ ಕ್ಯಾತ್ಸಂದ್ರ ನಿವಾಸಿ ಶಾಹಿಸ್ತಾ ಮತ್ತು ಜಮೀರ್ ದಂಪತಿ ತಮ್ಮ ಮಗುವಿಗೆ ʼಶಿವಮಣಿʼ ಎಂದು ನಾಮಕರಣ ಮಾಡುವ ಮೂಲಕ ಸೌಹಾರ್ದ ಸಾರಿದ್ದು ವಿಶೇಷವಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಬಂದಿದ್ದ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.

Ad Widget . Ad Widget .

Leave a Comment

Your email address will not be published. Required fields are marked *