ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

Ad Widget ... ..

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ನಡೆದಿದೆ.

Ad Widget

ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಮೃತೂರಿಗೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *