ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಹಾಗೂ ನಾಳೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.




























