ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ.
2003-04ರಿಂದ ಬಿಸಿಯೂಟ ಯೋಜನೆ ಆರಂಭವಾಗಿದ್ದು 60 ವರ್ಷ ಮೀರಿದ್ರೂ, ಆರೋಗ್ಯವಾಗಿದ್ದರೆ ಮಾನವೀಯತೆ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಸಿಕೊಂಡು ಬರಲು ಅವಕಾಶ ನೀಡಿತ್ತು. ಆದರೆ, ಸಧ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, 60 ವರ್ಷ ಪೂರ್ಣಗೊಳಿಸಿದವರನ್ನ ಅಡುಗೆ ಕರ್ತವ್ಯದಿಂದ ತೆರವುಗೊಳಿಸುವಂತೆ ತಿಳಿಸಿದೆ.
ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.