ಸಮಗ್ರ ನ್ಯೂಸ್: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ.
“ಶ್ರೀ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ’ ಎಂದು ಕನ್ನಡ ಮತ್ತು ಸಾಹಿತ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದುಬಂದಿಲ್ಲ.
