ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್)ದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget ... ..

ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗಲೇ ಪ್ರಭಾಕರ್ ಭಟ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನು ಕೆಲ ಕಿಡಿಗೇಡಿಗಳು ಜಾಲತಾಣಗಳಲ್ಲಿ ಕಲ್ಲಡ್ಕರವರ ಕುರಿತು ಅಸಂಬದ್ಧ ಸುದ್ದಿಗಳನ್ನು ಹರಿಯ ಬಿಡುತ್ತಿದ್ದಾರೆ. ಜಾಲತಾಣಗಳಲ್ಲಿ ವಿಕೃತಿ ಮೆರೆಯುತ್ತಿರುವ ಈ ಕಿಡಿಗೇಡಿಗಳ ಕುರಿತು ನಿಗಾವಹಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *