ಮಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಅಗ್ನಿಗಾಹುತಿ; ಪ್ರಯಾಣಿಕರು ಅದೃಷ್ಟವಶಾತ್ ಪಾರು

ಸಮಗ್ರ ನ್ಯೂಸ್: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸಿಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ‌ನಗರದ ಹಂಪನಕಟ್ಟೆ ವೃತ್ತದ ಬಳಿ ಅವಘಡ ಸಂಭವಿಸಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Ad Widget ... ..

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸಿನ ಎದುರಿನ ಚಕ್ರದಡಿಗೆ ಬೈಕ್ ಬಿದ್ದಿದೆ. ಅಪಘಾತದಲ್ಲಿ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬಸ್ಸಿಗೆ ಬೆಂಕಿ ತಗುಲಿದೆ.

Ad Widget

ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ಸಿನ ‌ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿದ್ದವರು ಪಾರಾಗಿದ್ದಾರೆ. ಬಸ್ಸಿಗೆ ಬೆಂಕಿ ಬೀಳುತ್ತಲೇ ಬಸ್ ನಿರ್ವಾಹಕ ಪ್ರಯಾಣಿಕರನ್ನು ಇಳಿಸಿದ್ದಾರೆ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿ ಹೋಗಿದೆ.

Leave a Comment

Your email address will not be published. Required fields are marked *