Ad Widget .

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ| 8 ಜನರಿಂದ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್

Ad Widget . Ad Widget .

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ.

Ad Widget . Ad Widget .

ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಷಯ ತಿಳಿದ ಪೋಷಕರು ಯಲಹಂಕ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

Leave a Comment

Your email address will not be published. Required fields are marked *