Ad Widget .

ಮಹಿಳೆಯಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಹತ್ಯೆಗೈಯಲು ಯತ್ನಿಸಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ದುಷ್ಕರ್ಮಿಗಳು ಆಕೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈಯ್ಯಲು ಯತ್ನಿಸಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Ad Widget . Ad Widget .

ನಮಕ್ಕಾನ ಪೊಲೀಸ್ ಠಾಣೆಯ ದಕ್ಷಿಣ 24 ಪ್ಯಾರಗಾನ್ಸ್ ನಲ್ಲಿ ಏಪ್ರಿಲ್ 8ರಂದು ಈ ಘಟನೆ ನಡೆದಿದೆ. ಮನೆಯಲ್ಲಿ ಒಬ್ಬಳೇ ಇದ್ದ ಮಹಿಳೆ ಶೌಚಾಲಯಕ್ಕೆಂದು ಮನೆಯಿಂದ ಹೊರಗೆ ಹೋಗಿದ್ದಾಗ ಆಕೆಯನ್ನು 5 ಮಂದಿ ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ. ಎರಡನೇ ಮಹಡಿ ಮೇಲೆ ಹೊತ್ತೊಯ್ದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾರೆ.

Ad Widget . Ad Widget .

ಮಹಿಳೆಯ ಕಿರುಚಾಟ ಕೇಳಿದ ಅಕ್ಕಪಕ್ಕದ ಮನೆಯವರು ಮನೆಗೆ ಬಂದಿದ್ದಾರೆ. ಅಷ್ಟರಲ್ಲಿ ಜನರು ಬಂದಿದ್ದು ನೋಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆಯ ಆಘಾತಕ್ಕೆ ಒಳಗಾಗಿದ್ದ ಮಹಿಳೆ ತಕ್ಷಣವೇ ಪೊಲೀಸರಿಗೆ ದೂರು ನೀಡದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Leave a Comment

Your email address will not be published. Required fields are marked *