Ad Widget .

ಕರ್ನಾಟಕದಲ್ಲಿ ಇಂದಿನಿಂದ ಬಿಜೆಪಿ ಚುನಾವಣೆ ಶಸ್ತ್ರಾಭ್ಯಾಸ| ಮೂರು ತಂಡದಲ್ಲಿ ರಾಜ್ಯ ಪ್ರವಾಸಕ್ಕೆ ಕೇಸರಿ ಪಡೆ ಸನ್ನದ್ಧ

Ad Widget . Ad Widget .

ಸಮಗ್ರ ನ್ಯೂಸ್: ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಮೂರು ತಂಡಗಳ ನೇತೃತ್ವದ ರಾಜ್ಯ ಪ್ರವಾಸ ಮಂಗಳವಾರದಿಂದ ಆರಂಭವಾಗಲಿದೆ.

Ad Widget . Ad Widget .

ಮಂಗಳವಾರದಿಂದ ಈ ತಿಂಗಳ 24ರವರೆಗೆ ಅಂದರೆ, 12 ದಿನಗಳ ಕಾಲ ಮೂರು ತಂಡಗಳು ಪ್ರವಾಸ ನಡೆಸಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮೂರು ತಂಡಗಳು ರಚನೆಯಾಗಿದ್ದು, ಅವುಗಳಲ್ಲಿ ಹಿರಿಯ ನಾಯಕರು ಇದ್ದಾರೆ.

ಈ ತಂಡಗಳು ತಮಗೆ ನಿಗದಿಪಡಿಸಿದ ಪಕ್ಷವಾರು ಸಂಘಟನೆಯ ವಿಭಾಗಗಳಲ್ಲಿ ಪ್ರವಾಸ ಕೈಗೊಂಡು ಅಲ್ಲಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಸ್ಥಳೀಯ ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಚರ್ಚಿಸಿ ಬಗೆಹರಿಸಲಿದ್ದಾರೆ. ಸಂಘಟನೆ ಬಲಪಡಿಸುವ ಬಗ್ಗೆ ಸಲಹೆ ಸೂಚನೆ ನೀಡಲಿದ್ದಾರೆ. ಜತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಬಗೆಯನ್ನು ಕಾರ್ಯಕರ್ತರಿಗೆ ತಿಳಿ ಹೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *