ಸಮಗ್ರ ನ್ಯೂಸ್: ಈ ವರ್ಷದಿಂದ ಪಠ್ಯದಲ್ಲಿ ಭಗವದ್ಗೀತೆ ಬೋಧನೆಗೆ ತಯಾರಿ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ,ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಭಗವದ್ಗೀತೆ, ರಾಮಾಯಣ, ಮಹಾಭಾರತ ಸೇರಿ ನೈತಿಕ ಕತೆ ಅಳವಡಿಸಲಾಗುತ್ತದೆ.
ಭಗವದ್ಗೀತೆ ಧಾರ್ಮಿಕ ಆಚರಣೆಯಲ್ಲ, ಪೂಜಾ ವಿಧಾನವಲ್ಲ, ಜೀವನಕ್ಕೆ ಬೇಕಾದ ಮಾರ್ಗದರ್ಶನ ಅಡಗಿದೆ ಎಂದು ನಾಗೇಶ್ ಹೇಳಿದ್ದಾರೆ.