ಪರೀಕ್ಷೆ ಬರೆಯುತ್ತಿದ್ದಾಗ ಶಿಕ್ಷಕನಿಂದಲೇ ದೌರ್ಜನ್ಯ| ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರೂ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ.

Ad Widget ... ..

ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ 45 ವರ್ಷದ ಪರಮೇಶ್ ಐರಣಿ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ‌ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

Ad Widget

ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದ ಸುಪರ್ ವೈಸರ್ ಆಗಿದ್ದ ಶಿಕ್ಷಕ ಪರಮೇಶ್ ಪರೀಕ್ಷೇ ಶುರುವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಶಿಕ್ಷಕನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *