ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೇಯನ್ನು ಕೆ.ಎಸ್ ಈಶ್ವರಪ್ಪ ನೀಡಿದ್ದಾರೆ. ಈ ಬಗ್ಗೆ ಅವರು ಶಿವಮೊಗ್ಗದಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಮಾಹಿತಿ ನೀಡಿದರು. ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ನಿನ್ನೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ನಾನು ಯಾವುದೇ ಕಾರಣಕ್ಕೂ ನನ್ನ ರಾಜೀನಾಮೆಯನ್ನು ಸಚಿವ ಸ್ಥಾನಕ್ಕೆ ನೀಡೋದಿಲ್ಲ ಅಂತ ಹೇಳಿದ್ದರು, ಇದಲ್ಲದೇ ನಾನು ಇನ್ನೂ ಮೂರು ದಿನಗಳ ಕಾಲ ಮಾಧ್ಯಮಗಳ ಜೊತೆಗೆ ಮಾತನಾಡುವುದಿಲ್ಲ ಅಂತ ಹೇಳಿದ್ದರು, ಆದ್ರೆ ಈಗ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.