Ad Widget .

ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ| 40% ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿ ಕಟ್ಟಾಳು

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಕ್ಕೆ ಕೆ.ಎಸ್. ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.

Ad Widget . Ad Widget .

ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ತೆರಳಿ ಅಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

Ad Widget . Ad Widget .

ಇದಕ್ಕೂ ಮೊದಲು ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಶುಕ್ರವಾರ ಸಿಎಂ ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ ಅವರು ಇಂದು ಸಿಎಂ ಭೇಟಿಯಾಗಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಅನ್ನು ಕಾಮಗಾರಿ ಗುತ್ತಿಗೆಗಳಲ್ಲಿ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು.

ಬಳಿಕ ಗುತ್ತಿಗೆದಾರ ಸಂತೋಷ್ ಬುಧವಾರ ಉಡುಪಿಯಲ್ಲಿ ನೇಣಿಗೆ ಶರಣಾಗಿದ್ದರು. ಬಳಿಕ ಸಂತೋಷ್ ಈಶ್ವರಪ್ಪನವರು ಸಂತೋಷ್ ಆತ್ಮಹತ್ಯೆಗೆ ಕಾರಣ ಅಂತ ಕಾಂಗ್ರೆಸ್‌ನಿಂದ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.

ಸಿಎಂ ಈಶ್ವರಪ್ಪನವರ ರಾಜೀನಾಮೆಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಿದ್ದು, ರಾಜ್ಯಪಾಲರು ಅವರ ರಾಜೀನಾಮೆಯನ್ನು ಸೋಮವಾರ ಅಂಗೀಕಾರ ಮಾಡಲಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಈಶ್ವರಪ್ಪ ಅವರು ತಮ್ಮ ರಾಜೀನಾಮೆ ನೀಡಲು ಸಿಎಂ ಅಧಿಕೃತ ನಿವಾಸದ ಬಳಿ ಆಗಮಿಸಿದ ವೇಳೆ ಬಿಜೆಪಿ ಬೆಂಬಲಿಗರು ಗಲಾಟೆ ನಡೆಸಿ, ಧಿಕ್ಕಾರ ಕೂಗಿದರು,

Leave a Comment

Your email address will not be published. Required fields are marked *