Ad Widget .

ಮಾಣಿ : ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ| ಆಸ್ಪತ್ರೆಗೆ ಸಾಗಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಸಮಗ್ರ ನ್ಯೂಸ್ : ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಮಾಣಿ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ.

Ad Widget . Ad Widget .

ರಿಕ್ಷಾ ಚಾಲಕನನ್ನು ಪುತ್ತೂರಿನ ನವೀನ್ ಎಂದು ಗುರುತಿಸಲಾಗಿದೆ. ಈತ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮಾಣಿ ಸಮೀಪ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿದ್ದರು. ಈ ವೇಳೆ ಘಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಣಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಕ್ಷಣ ಕಾರಿನಲ್ಲಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget . Ad Widget .

ಯುವ ಕಾರ್ಯಕರ್ತರ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ಲಭಿಸಿದೆ. ಇನ್ನೂ ಈ ಕಾರ್ಯದಲ್ಲಿ ಮಾಣಿ ಯುವ ಕಾಂಗ್ರೆಸ್ ನ ಅಧ್ಯಕ್ಷ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ವಿಕೇಶ್ (ವಿಕ್ಕಿ) ಶೆಟ್ಟಿ, ಪುನೀತ್ ಹಳಿರ, ನೌಪಲ್ ಸೂರಿಕುಮೇರ್, ಅಜಿತ್ ಸೋರಿಕುಮೇರ್ ಇನ್ನಿತರರು ಸಹಕರಿಸಿದ್ದಾರೆ.

Leave a Comment

Your email address will not be published. Required fields are marked *