Ad Widget .

ನಾಳೆ ಜೆಡಿಎಸ್ ರಾಜ್ಯಾದ್ಯಕ್ಷರಾಗಿ ಸಿ.ಎಂ ಇಬ್ರಾಹಿಂ ಪದಗ್ರಹಣ

ಸಮಗ್ರ ನ್ಯೂಸ್: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಎ.17ರಂದು ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದ್ದಾರೆ.

Ad Widget . Ad Widget .

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

Ad Widget . Ad Widget .

ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *