Ad Widget .

ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕ ಪರಾರಿ| ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಹಿಂದೂ ಯುವತಿಯೊಂದಿಗೆ ಪರಾರಿಯಾದ ಮುಸ್ಲಿಂ ಯುವಕನ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಗ್ರಾದ ರುನಕ್ತಾ ಪ್ರದೇಶದಲ್ಲಿ ಈ ಕೃತ್ಯ ಎಸಗಲಾಗಿದೆ.

Ad Widget . Ad Widget .

ಇಲ್ಲಿನ ಜಿಮ್ ಒಂದರ ಮಾಲೀಕ ಸಾಜಿದ್ ಅವರ ಮನೆಗೆ ಧರಮ್ ಜಾಗರಣ ಸಮನ್ವಯ್ ಸಂಘದ ಸದಸ್ಯರು ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಮನೆಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಹಿಂದೂ ಯುವತಿಯನ್ನು ಸಾಜೀದ್‌ ಅಪಹರಿಸಿದ್ದಾನೆಂದು ಆರೋಪಿಸಲಾಗಿದೆ. ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ. ಬೆಂಕಿ ಹಚ್ಚಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Leave a Comment

Your email address will not be published. Required fields are marked *